ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಖ್ಯಾತ ನಟಿ, ‘ಬಿಗ್ ಬಾಸ್’ ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಬದುಕು ಮದುವೆಯಾದ ನಾಲ್ಕೇ ವರ್ಷಕ್ಕೆ ಮುರಿದು ಬೀಳುವ ಸೂಚನೆ ಸಿಕ್ಕಿದೆ. ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಕನ್ನಡದ ‘ಮೊಗ್ಗಿನ ಮನಸು’ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಶುಭಾ ಪೂಂಜಾ, ಉದ್ಯಮಿ ಸುಮಂತ್ ಬಿಲ್ಲವ ಅವರನ್ನು ಪ್ರೀತಿಸಿ 2022ರ ಜನವರಿಯಲ್ಲಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ಈ ದಂಪತಿ ಅತ್ಯಂತ ಖುಷಿ ಖುಷಿಯಾಗಿಯೇ ಕಾಲ ಕಳೆದಿದ್ದರು. ಆದರೆ, ಈಗ ಏಕಾಏಕಿ ಬೇರೆ ಆಗಲು ಮುಂದಾಗಿರೋದು ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.

