ಮಂಗಳೂರು(reporterkarnataka.com): “ಜಯಕಿರಣ ಫಿಲಂಸ್ ಲಾಂಛನದಲ್ಲಿ , ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಅದ್ಭುತವಾಗಿ ಸಿದ್ಧಗೊಂಡಿರುವ ನಾನ್ ವೆಜ್ ತುಳು ಸಿನಿಮಾ ಫೆಬ್ರವರಿ 6ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ, ಈ ಸಿನಿಮಾವನ್ನು ಎಲ್ಲ ಮಲ್ಟಿಪ್ಲೆಕ್ಸ್ನಲ್ಲೂ ಕೇವಲ 99 ರೂ.ಗೆ ನೋಡಬಹುದಾಗಿದೆ.
ದುಬಾರಿ ಟಿಕೆಟ್ ಕೊಟ್ಟು ಸಿನಿಮಾ ನೋಡಲು ಸಾಧ್ಯವಾಗದವರು ಇಂಥದ್ದೊಂದು ಸುಂದರ ಹಾಗೂ ಅತ್ಯುತ್ತಮ ಸಿನಿಮಾವನ್ನು ನೋಡದೆ ಇರಬಾರದು ಎಂಬ ಉದ್ದೇಶದಿಂದ ಕೇವಲ 99 ರೂ. ಟಿಕೆಟ್ ನಿಗದಿಪಡಿಸಿದ್ದು, ಇದು ತುಳುಚಿತ್ರರಂಗದಲ್ಲಿ ಒಂದು ಹೊಸ ಸಂಚಲನ ಉಂಟು ಮಾಡಿದೆ. ಸಿಂಗಲ್ ಥಿಯೇಟರ್ಗಿಂತಲೂ ಕಡಿಮೆ ದರದಲ್ಲಿ ಈ ಸಿನಿಮಾವನ್ನು ತುಳು ಪ್ರೇಮಿಗಳು ಮಲ್ಟಿಫ್ಲೆಕ್ಸ್ ಗಳಲ್ಲಿ ನೋಡುವಂತಹ ಅವಕಾಶ ಇದಾಗಿದೆ“ ಎಂದು ಚಿತ್ರದ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

