Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಪ್ರಮುಖ ಸುದ್ದಿ»ಕ್ಯಾಬ್ ಡ್ರೈವರ್ ಆಲಿಯ ಲವ್ ಜಿಹಾದ್ ಉರುಳಿಗೆ ಬಲಿಯಾದಳಾ ವೈದ್ಯೆ ಸುರಭಿ ?
    ಪ್ರಮುಖ ಸುದ್ದಿ

    ಕ್ಯಾಬ್ ಡ್ರೈವರ್ ಆಲಿಯ ಲವ್ ಜಿಹಾದ್ ಉರುಳಿಗೆ ಬಲಿಯಾದಳಾ ವೈದ್ಯೆ ಸುರಭಿ ?

    adminBy adminJune 30, 2026
    Share Facebook Twitter Email WhatsApp Copy Link
    surabhi death

    ಚಿಕ್ಕಬಳ್ಳಾಪುರದ ನಂದಿಬೆಟ್ಟದ ಹೋಮ್‌ಸ್ಟೇ ಒಂದರಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ. ಪ್ರೇಯಸಿ ಸುರಭಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಸಂಜಿತ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

    ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದ ಸುಲ್ತಾನ ಪೇಟೆಯ ನಿವಾಸಿಯಾಗಿದ್ದ ಸುರಭಿ, ಮುದ್ದೇನಹಳ್ಳಿ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ವೈದ್ಯೆಯಾಗಿದ್ದರು. ಕೆಲವು ತಿಂಗಳ ಹಿಂದೆ ಬೆಂಗಳೂರಿಗೆ ಟ್ರೇನಿಂಗ್‌ಗೆ ಬಂದಿದ್ದಾಗ, ಕೇರಳ ಮೂಲದ ಕ್ಯಾಬ್ ಡ್ರೈವರ್ ಸಂಜೀತ್ ಆಲಿ ಎಂಬಾತನ ಪರಿಚಯವಾಗಿತ್ತು. ಪ್ರತಿದಿನ ಪಿಕಪ್ ಮತ್ತು ಡ್ರಾಪ್ ಮಾಡುವಾಗ ಶುರುವಾದ ಸಲುಗೆ, ಕೊನೆಗೆ ಪ್ರೀತಿಗೆ ತಿರುಗಿತ್ತು. ಪ್ರೇಮದ ಅಮಲಿನಲ್ಲಿ ಇಬ್ಬರೂ ಮನೆ ಬಿಟ್ಟು ಓಡಿಹೋಗಿದ್ದರು. ಈ ಸಂಬಂಧ ಪೋಷಕರು ಮಿಸ್ಸಿಂಗ್ ಕೇಸ್ ಕೂಡ ದಾಖಲಿಸಿದ್ದರು.

    ನಂತರದ ದಿನಗಳಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳು ಶುರುವಾಗಿ, ಸುರಭಿ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಆಲಿ ವಿರುದ್ಧ ದೂರು ನೀಡಿದ್ದರು. ತದನಂತರ ಕಳೆದ 6 ತಿಂಗಳಿನಿಂದ ಇಬ್ಬರೂ ದೂರವಾಗಿದ್ದರು. ಆದರೆ, ಇತ್ತೀಚೆಗೆ ಆಲಿ ಮತ್ತೆ ಸುರಭಿಯನ್ನು ಪುಸಲಾಯಿಸಿ ಮಾತನಾಡಿಸಲು ಶುರು ಮಾಡಿದ್ದ ಎನ್ನಲಾಗಿದೆ.

    ನಂದಿ ಬೆಟ್ಟದ ಹೋಂ ಸ್ಟೇನಲ್ಲಿ ನಡೆದಿದ್ದೇನು?

    ಎರಡು ದಿನಗಳ ಹಿಂದೆ ಮುದ್ದೇನಹಳ್ಳಿ ಬಳಿಯ ಹೋಂಸ್ಟೇನಲ್ಲಿ ಆಲಿ ರೂಮ್ ಬುಕ್ ಮಾಡಿದ್ದ. ಆತನ ಮಾತು ನಂಬಿ ಅಲ್ಲಿಗೆ ಹೋದ ಸುರಭಿ, ಮರಳಿ ಬರಲೇ ಇಲ್ಲ. ಮೂಲಗಳ ಪ್ರಕಾರ, ಅಲ್ಲಿ ಇಬ್ಬರೂ ಡ್ರಗ್ಸ್ ಸೇವನೆ ಮಾಡಿದ್ದರು ಎನ್ನಲಾಗಿದ್ದು, ತದನಂತರ ನಡೆದ ಗಲಾಟೆಯಲ್ಲಿ ಸುರಭಿ ಉಟ್ಟ ಸೀರೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚೆಕ್-ಔಟ್ ಸಮಯ ಮುಗಿದರೂ ರೂಮ್ ಬಾಗಿಲು ತೆರೆಯದಿದ್ದಾಗ ಸಿಬ್ಬಂದಿ ಬಂದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.  ಇತ್ತ ಪ್ರಿಯಕರ ಸಂಜೀತ್ ಆಲಿ ಕೂಡ ಅಸ್ವಸ್ಥನಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

    ‘ಲವ್ ಜಿಹಾದ್’ ಆರೋಪ ಮಾಡಿದ ಹೆತ್ತವರು

    ಮಗಳ ನಿಗೂಢ ಸಾವಿನ ಬೆನ್ನಲ್ಲೇ ಸುರಭಿ ಪೋಷಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. “ಇದು ಲವ್ ಜಿಹಾದ್, ಪ್ಲ್ಯಾನ್ ಮಾಡಿ ನಮ್ಮ ಮಗಳನ್ನು ಬಲಿ ಪಡೆದಿದ್ದಾರೆ” ಎಂದು ತಾಯಿ ಗೀತಾ ಆರೋಪಿಸಿದ್ದಾರೆ. ಘಟನಾ ಸ್ಥಳದಲ್ಲಿ ಸುರಭಿ ಬರೆದಿದ್ದ ಡೈರಿಯೊಂದು ಪತ್ತೆಯಾಗಿದ್ದು, ಸಾವಿನ ರಹಸ್ಯವನ್ನು ಭೇದಿಸಲು ಪೊಲೀಸರಿಗೆ ಪ್ರಮುಖ ಆಧಾರವಾಗಿದೆ.

    ಸದ್ಯ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅಸಲಿ ಸತ್ಯ ಪೋಸ್ಟ್‌ಮಾರ್ಟಮ್ ವರದಿ ಹಾಗೂ ಆಲಿಯ ವಿಚಾರಣೆಯ ನಂತರ ಹೊರಬರಬೇಕಿದೆ.

    Share. Facebook Twitter Email WhatsApp Copy Link
    Previous Articleಮಂಗಳೂರು ಕಡೆಯವರು ದೊಡ್ಡ ಗೌಡರಲ್ಲ, ಹಳೇ ಮೈಸೂರು ಭಾಗದವರನ್ನೇ ಒಕ್ಕಲಿಗರು ಅನ್ನೋದು – ಶಾಸಕ ಎಸ್. ಆರ್. ವಿಶ್ವನಾಥ್
    Next Article Gruha Jyothi ಯೋಜನೆಯಲ್ಲಿ ಮಹತ್ವದ ಬದಲಾವಣೆ; ಈ ದಾಖಲೆ ಇರದಿದ್ದರೆ ಉಚಿತ ವಿದ್ಯುತ್ ಕಟ್!

    Related Posts

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026

    ಇಂದಿನಿಂದ ಪೆಟ್ರೋಲ್‌, ಡೀಸೆಲ್‌ ದರ 60 ಪೈಸೆ ಏರಿಕೆ

    August 12, 2026

    ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ವಿಜಯ್ ಸರ್ಕಾರ

    August 10, 2026

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.