Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಸ್ಥಳೀಯ ಸುದ್ದಿ»ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಪ್ರಕರಣಗಳಲ್ಲಿ ಕಾನೂನಿನ ಸಮಾನ ಅನ್ವಯಕ್ಕೆ ಆಗ್ರಹಿಸಿ ಡಿಜಿಪಿಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮನವಿ – ತಕ್ಷಣವೇ ಕ್ರಮಕ್ಕೆ ಡಿಜಿಪಿ ಸೂಚನೆ
    ಸ್ಥಳೀಯ ಸುದ್ದಿ

    ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಪ್ರಕರಣಗಳಲ್ಲಿ ಕಾನೂನಿನ ಸಮಾನ ಅನ್ವಯಕ್ಕೆ ಆಗ್ರಹಿಸಿ ಡಿಜಿಪಿಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮನವಿ – ತಕ್ಷಣವೇ ಕ್ರಮಕ್ಕೆ ಡಿಜಿಪಿ ಸೂಚನೆ

    adminBy adminJuly 8, 2026
    Share Facebook Twitter Email WhatsApp Copy Link

    ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಪ್ರಕರಣಗಳಲ್ಲಿ ಕಾನೂನಿನ ಸಮಾನ ಅನ್ವಯಕ್ಕೆ ಆಗ್ರಹಿಸಿ ಡಿಜಿಪಿಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮನವಿ – ತಕ್ಷಣವೇ ಕ್ರಮಕ್ಕೆ ಡಿಜಿಪಿ ಸೂಚನ

    ಬೆಂಗಳೂರು: ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಎಲ್ಲ ಪ್ರಕರಣಗಳಲ್ಲಿ ಯಾವುದೇ ತಾರತಮ್ಯವಿಲ್ಲದೆ ಕಾನೂನನ್ನು ಸಮಾನವಾಗಿ ಅನ್ವಯಿಸಬೇಕು ಹಾಗೂ ದಾಖಲಾಗಿರುವ ಪ್ರಕರಣಗಳಲ್ಲಿ ತ್ವರಿತ ಮತ್ತು ನಿಷ್ಪಕ್ಷಪಾತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರಿಗೆ (DGP & IGP) ಮಾನ್ಯ ಸಲೀಂ ಅವರಿಗೆ ಮನವಿ ಸಲ್ಲಿಸಲಾಯಿತು.

    ಸಮಿತಿಯ ಮನವಿಯಲ್ಲಿ, ದಿನಾಂಕ 09-06-2026ರಂದು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ. ಕೆ. ಎಸ್. ಭಗವಾನ್ ಅವರು ಭಗವಾನ್ ಶ್ರೀರಾಮ ಹಾಗೂ ಹಿಂದೂ ಧರ್ಮದ ಆರಾಧ್ಯ ದೇವತೆಗಳ ಕುರಿತು ನೀಡಿರುವ ಹೇಳಿಕೆಗಳಿಂದ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಉಲ್ಲೇಖಿಸಲಾಗಿದೆ. ಈ ಸಂಬಂಧ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿದ್ದರೂ ಇದುವರೆಗೆ ಪರಿಣಾಮಕಾರಿ ಕಾನೂನು ಕ್ರಮ ಜರುಗಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

    ಅದೇ ರೀತಿ, ಆರ್ಯವರ್ದನ ಗುರುಜಿಯವರು ಶ್ರೀ ಮಹಾಲಕ್ಷ್ಮೀ ದೇವಿಯ ಕುರಿತು ನೀಡಿದ ಹೇಳಿಕೆಗಳ ಸಂಬಂಧ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸಮಿತಿ ಗಮನ ಸೆಳೆದಿದೆ.

    ಇನ್ನೊಂದೆಡೆ, ಮತ್ತೊಂದು ಪ್ರಕರಣದಲ್ಲಿ ದೂರು ದಾಖಲಾದ ಕೂಡಲೇ ಪೊಲೀಸರು ತ್ವರಿತವಾಗಿ ಕ್ರಮ ಕೈಗೊಂಡಿರುವುದನ್ನು ಉಲ್ಲೇಖಿಸಿದ ಸಮಿತಿಯು, ಎಲ್ಲ ಪ್ರಕರಣಗಳಲ್ಲಿಯೂ ಭಾರತ ಸಂವಿಧಾನದ ಅನುಚ್ಛೇದ 14ರ ಆಶಯಕ್ಕೆ ಅನುಗುಣವಾಗಿ ಕಾನೂನಿನ ಮುಂದೆ ಸಮಾನತೆ ಮತ್ತು ಕಾನೂನಿನ ಸಮಾನ ರಕ್ಷಣೆ ಖಚಿತಪಡಿಸಬೇಕು ಎಂದು ಒತ್ತಾಯಿಸಿದೆ.

    ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಮಾನ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರು ತಕ್ಷಣವೇ ಸಂಬಂಧಿಸಿದ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು.

    ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕರೆ ಮಾಡಿ, ಪ್ರೊ. ಕೆ. ಎಸ್. ಭಗವಾನ್ ಅವರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ತನಿಖೆಯನ್ನು ತ್ವರಿತಗೊಳಿಸಿ, ಕಾನೂನಿನ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

    ಅದೇ ರೀತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೂ ದೂರವಾಣಿ ಮೂಲಕ ಸೂಚನೆ ನೀಡಿ, ಆರ್ಯವರ್ದನ ಗುರುಜಿಯವರ ವಿರುದ್ಧ ದಾಖಲಾಗಿರುವ ಪ್ರಕರಣದ ಕುರಿತು ಕಾನೂನುಬದ್ಧವಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

    ಈ ಸಂದರ್ಭದಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯು ಡಿಜಿಪಿಯವರ ತ್ವರಿತ ಸ್ಪಂದನೆಯನ್ನು ಸ್ವಾಗತಿಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಎಲ್ಲ ಪ್ರಕರಣಗಳಲ್ಲಿಯೂ ಯಾವುದೇ ತಾರತಮ್ಯ, ವಿಳಂಬ ಅಥವಾ ಪಕ್ಷಪಾತವಿಲ್ಲದೆ ಏಕರೂಪದ, ಪಾರದರ್ಶಕ ಹಾಗೂ ನಿಷ್ಪಕ್ಷಪಾತ ಕಾನೂನು ಕ್ರಮ ಜರುಗಬೇಕು ಎಂದು ಆಗ್ರಹಿಸಿದೆ.

    ಈ ನಿಯೋಗದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ ಮೋಹನ ಗೌಡ, ಶ್ರೀರಾಮ ಸೇನೆಯ ಶ್ರೀನಿವಾಸ ಗುರುಜಿ, ಮಲ್ಲಿಕಾರ್ಜುನ ರಾಜು, ಅಡ್ವೊಕೇಟ್ ಗಂಗಾಧರ, ರಾಘವೇಂದ್ರ, ಮೋಹನ್ ಸೇರಿದಂತೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

    Share. Facebook Twitter Email WhatsApp Copy Link
    Previous Articleಪುತ್ತೂರಿನ ವಿದ್ಯುತ್ ಸಮಸ್ಯೆ; ಮೆಸ್ಕಾಂ ಅಧಿಕಾರಿಗಳ ಭೇಟಿ ಮಾಡಿ, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ
    Next Article ವಿಜಯ ದಶಮಿಗೆ ಒಂದು ದಿನ ಬಿಜೆಪಿಯ ಲೀಡರ್ ಮಗ RSS ಚಡ್ಡಿ ಪ್ಯಾಂಟ್ ಹಾಕೋದು – ಪ್ರಿಯಾಂಕ್‌ ಖರ್ಗೆ

    Related Posts

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    August 12, 2026

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ ಶಾಸಕ ಹರೀಶ್ ಪೂಂಜ

    August 6, 2026

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    August 2, 2026

    ಅಪಾಯಕಾರಿ ಗುಂಡಿ ರಸ್ತೆಯಿಂದ ಸಾರ್ವಜನಿಕರಿಗೆ ಸಂಕಷ್ಟ; ತಕ್ಷಣ ದುರಸ್ತಿಗೆ ಪುತ್ತಿಲ ಪರಿವಾರ ಮನವಿ..!

    August 1, 2026

    ಕುನಾಲ್ ಕಾಮ್ರಾ ಕಾಮಿಡಿ ಶೋ ರದ್ದುಪಡಿಸುವಂತೆ ಆಗ್ರಹಿಸಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮನವಿ

    August 1, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.