ಮಂಗಳೂರಿನಲ್ಲಿ ಹಿಂದೂ ಸಂಘಟನೆಗಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಹಾಗೂ ಸುಳ್ಳು ಆರೋಪ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಕಮಿಷನರ್ಗೆ ಮನವಿ ಸಲ್ಲಿಸಲು ವಿಎಚ್ಪಿ ಮುಂದಾಗಿದೆ. ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಸಂಘಟನೆಗಳ ವಿರುದ್ಧ “ಬೀಫ್ ಹೋಟೆಲ್ ಗಳಿಂದ ಹಫ್ತಾ /ಹಣ ಪಡೆಯಲಾಗುತ್ತಿದೆ” ಎಂಬ ಆಧಾರರಹಿತ ಹಾಗೂ ಸುಳ್ಳು ಆರೋಪಗಳನ್ನು ಮಾಡಿ, ಸಂಘಟನೆಯ ವರ್ಚಸ್ಸಿಗೆ ಧಕ್ಕೆ ತರುವ ಕುತಂತ್ರ ನಡೆಯುತ್ತಿದೆ. ಇಂತಹ ಅಪಪ್ರಚಾರಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹಿಂದೂ ಸಂಘಟನೆಯ ಮುಖಂಡರಾದ ಪ್ರದೀಪ್ ಸರಿಪಳ್ಳ ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಾಸತ್ಯತೆ ಹೊರಬರಬೇಕಾದರೆ, ಪೊಲೀಸ್ ಇಲಾಖೆಯು ತಕ್ಷಣವೇ ಸೂಕ್ತ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇದಕ್ಕೆ ಸಂಬಂಧಿಸಿದಂತೆ ಪ್ರಮುಖ ಮೂರು ಆಗ್ರಹಗಳನ್ನು ಸಹ ಪಟ್ಟಿ ಮಾಡಿದೆ.
ಆರೋಪ ಮಾಡಿದವರ ವಿಚಾರಣೆ: ಹಿಂದೂ ಸಂಘಟನೆಗಳ ಮೇಲೆ ಇಂತಹ ಗಂಭೀರ ಆರೋಪ ಮಾಡಿದ ವ್ಯಕ್ತಿಯನ್ನು ತಕ್ಷಣವೇ ಸುದೀರ್ಘ ತನಿಖೆಗೆ ಒಳಪಡಿಸಿ, ಸತ್ಯಾಂಶವನ್ನು ಸಾರ್ವಜನಿಕರ ಮುಂದೆ ತರಬೇಕು.
ಅಕ್ರಮಗಳ ವಿರುದ್ಧ ಕ್ರಮ: ಕಾನೂನು ಬಾಹಿರವಾಗಿ ಕಾರ್ಯಾಚರಿಸುತ್ತಿರುವ ಬೀಫ್ ಹೋಟೆಲ್ ಗಳಿಂದ ಯಾರಾದರೂ ಹಫ್ತಾ ವಸೂಲಿ ಮಾಡುತ್ತಿದ್ದರೆ, ಅಂತಹ ವ್ಯಕ್ತಿಗಳನ್ನು ತಕ್ಷಣ ಬಂಧಿಸಿ ಕಾನೂನು ರೀತ್ಯ ಕ್ರಮ ಜರುಗಿಸಬೇಕು ಮತ್ತು ಕಾನೂನು ಬಾಹಿರ ಬೀಫ್ ಹೋಟೆಲ್ ಗಳನ್ನು ಮುಚ್ಚಿಸುವಲ್ಲಿ ಕ್ರಮ ಕೈಗೊಳ್ಳಬೇಕು
ಅಪಪ್ರಚಾರ ತಡೆ: ಆಧಾರವಿಲ್ಲದೆ ಹಿಂದೂ ಸಂಘಟನೆಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಪ್ರಕರಣ ದಾಖಲಿಸಬೇಕು.
ಸತ್ಯವು ಹೊರಬರಲು ಮತ್ತು ಹಿಂದೂ ಸಂಘಟನೆಗಳ ಮೇಲಿನ ಸುಳ್ಳು ಆರೋಪಗಳಿಗೆ ತೆರೆ ಎಳೆಯಲು ಮಾನ್ಯ ಪೊಲೀಸ್ ಕಮಿಷನರ್ರಿಗೆ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಗುತ್ತಿದೆ ಎಂದು ಪ್ರದೀಪ್ ಸರಿಪಳ್ಳ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

