Author: admin
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ ಕುರಿತು ರೈತರಲ್ಲಿ ಅಸಮಾಧಾನ ಮತ್ತು ಹಲವು ಪ್ರಶ್ನೆಗಳು ಮೂಡಿವೆ. ಈ ಪ್ರಶ್ನೆಗಳಿಗೆ ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು, ಬೆಳೆ ವಿಮಾ ವ್ಯವಸ್ಥೆಯಲ್ಲಿನ ಪ್ರತಿಯೊಂದು ಹಂತವನ್ನೂ ಪರಿಶೀಲಿಸಿ, ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು ಎಂದು ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಒತ್ತಾಯಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅತ್ಯುತ್ತಮ ಕೃಷಿಕ ಪರ ಯೋಜನೆಯಾಗಿದೆ. ಈ ಯೋಜನೆ ನಿರಂತರವಾಗಿ ಹಾಗೂ ಪರಿಣಾಮಕಾರಿಯಾಗಿ ಮುಂದುವರಿಯಬೇಕಾದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ವಿಮಾ ಸಂಸ್ಥೆಗಳು ಹಾಗೂ ರೈತ ಪ್ರತಿನಿಧಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದ್ದಾರೆ. 2016ರಲ್ಲಿ ಯೋಜನೆ ಜಾರಿಯಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹಲವು ವರ್ಷಗಳಲ್ಲಿ ಉತ್ತಮ ಪ್ರಮಾಣದ ಬೆಳೆ ವಿಮೆ ಪರಿಹಾರ ದೊರೆತಿದೆ.…
ಧರ್ಮಸ್ಥಳ ಸೌಜನ್ಯ ಪ್ರಕರಣ (soujanya murder case) ಮರು ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ (Supreme Court) ಮಹತ್ವದ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಸಂಜಯ್ಕುಮಾರ್ ಪೀಠ ಮರು ತನಿಖೆಗೆ ಆದೇಶಿಸಿದ್ದು, ಹೊಸ ಎಸ್ಐಟಿ ರಚಿಸಿ ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಸೂಚನೆ ನೀಡಿದೆ. ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ತನಿಖೆಯಲ್ಲಿ ಸೇರಿಸದಂತೆ ಸುಪ್ರೀಂ ಕೋರ್ಟ್ ಹೇಳಿದೆ. ಈ ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ (CBI) ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸೌಜನ್ಯಾ ತಾಯಿ ಕುಸುಮಾವತಿ ಗೌಡ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣವನ್ನು ಮರುತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್, ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸುವಂತೆ ಸೂಚಿಸಿದೆ.
ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ
ಪುತ್ತೂರಿನ ದರ್ಬೆಯಲ್ಲಿ ನಿನ್ನೆ ಸಂಜೆ ಜೆರಾಕ್ಸ್ ಅಂಗಡಿಯಲ್ಲಿ ನಡೆದ ಪ್ರಮಾದಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕರ ಮೇಲೆ ನಡೆದ ಗುಂಪು ಹಲ್ಲೆ ಪ್ರಕರಣವನ್ನು ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಅವರು ಖಂಡಿಸಿದ್ದು, ಗುಂಪು ಹಲ್ಲೆಯಿಂದಾಗಿ ಅಂಗಡಿಯ ಮಾಲಕಿ ಅಂಜನಾ ಪೈ ಅವರ ಕಾಲು ಮುರಿತಕ್ಕೆ ಒಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ಭೇಟಿಯಾಗಿ ಘಟನೆಯ ವಿವರ ಪಡೆದುಕೊಳ್ಳಲಾಯಿತು. ಬಳಿಕ ತಡರಾತ್ರಿ ಡಿವೈಎಸ್ಪಿ ಅವರನ್ನು ಭೇಟಿಯಾಗಿ ಗುಂಪು ಹಲ್ಲೆ ನಡೆಸಿದವರ ಮೇಲೆ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಗಿದೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ. ಇಂತಹ ಘಟನೆಗಳು ಕಳೆದ ಕೆಲ ತಿಂಗಳಿನಿಂದ ಪುತ್ತೂರು ಕ್ಷೇತ್ರದಲ್ಲಿ ಪದೇಪದೇ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಪುತ್ತಿಲರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿತಿನ್ ನಬಿನ್ ನೇತೃತ್ವದ ಬಿಜೆಪಿ ನೂತನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದೆ. ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ಹುದ್ದೆಗಳಿಗೆ ಹಲವು ಪ್ರಮುಖ ನಾಯಕರನ್ನು ನೇಮಕ ಮಾಡಲಾಗಿದೆ. ಈ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ. ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ರಾಷ್ಟ್ರೀಯ ಉಪಾಧ್ಯಕ್ಷರು 1. ವಸುಂಧರಾ ರಾಜೇ ಸಿಂಧಿಯಾ — ರಾಜಸ್ಥಾನ 2. ತೀರಥ್ ಸಿಂಗ್ ರಾವತ್ — ಉತ್ತರಾಖಂಡ 3. ರಾಮ್ ಮಾಧವ್ — ದೆಹಲಿ 4. ಬೈಜಯಂತ್ ಜೈ ಪಾಂಡಾ — ಒಡಿಶಾ 5. ಡಾ. ಪುರಂದೇಶ್ವರಿ — ಆಂಧ್ರಪ್ರದೇಶ 6. ರೇಖಾ ವರ್ಮಾ — ಉತ್ತರಪ್ರದೇಶ 7. ವರ್ಷಾಬೆನ್ ನರೇಂದ್ರಭಾಯಿ ದೋಶಿ — ಗುಜರಾತ್ 8. ಡಾ. ಭಾರತಿ ಪ್ರವೀಣ್ ಪವಾರ್ — ಮಹಾರಾಷ್ಟ್ರ 9. ಸರ್ದಾರ್ ಮನ್ಜೀತ್ ಸಿಂಗ್ ಬಾದಲ್ — ಪಂಜಾಬ್ 10. ಲಾಲ್ ಸಿಂಗ್ ಆರ್ಯ — ಮಧ್ಯಪ್ರದೇಶ 11. ಪ್ರೊ. ಎಂ.…
ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ
ಪುತ್ತೂರು ವಿಧಾನಸಭಾ ಕ್ಷೇತ್ರದ ಕೆದಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪುತ್ತೂರು–ಕಡಬ–ಸುಳ್ಯ ಪ್ರದೇಶಗಳ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಪುತ್ತಿಲ ಪರಿವಾರದ ನಿಯೋಗವು ಭೇಟಿ ನೀಡಿ, ತ್ಯಾಜ್ಯ ಸಂಗ್ರಹಣೆ ಹಾಗೂ ವಿಲೇವಾರಿ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿತು. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತ್ಗಳಿಂದ ಸಂಗ್ರಹಿಸಲಾಗುತ್ತಿರುವ ತ್ಯಾಜ್ಯವು ಘಟಕದಲ್ಲಿ ಸಮರ್ಪಕವಾಗಿ ವಿಲೇವಾರಿಯಾಗುತ್ತಿಲ್ಲ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ನಿಯೋಗವು ಘಟಕಕ್ಕೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಘಟಕದ ಕಾರ್ಯನಿರ್ವಹಣೆ, ತ್ಯಾಜ್ಯ ಸಂಗ್ರಹಣೆ ಹಾಗೂ ವಿಲೇವಾರಿ ವ್ಯವಸ್ಥೆಯನ್ನು ಸ್ಥಳದಲ್ಲೇ ನಿಯೋಗವು ವೀಕ್ಷಿಸಿತು. ಘಟಕದಲ್ಲಿ ತ್ಯಾಜ್ಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸುವುದು ಹಾಗೂ ಹೆಚ್ಚುವರಿ ಶಿಫ್ಟ್ಗಳಲ್ಲಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿಯೋಗದ ವತಿಯಿಂದ ಅರುಣ್ ಕುಮಾರ್ ಪುತ್ತಿಲ ತಿಳಿಸಿದರು. ನಂತರ ಪುತ್ತೂರು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿಯವರೊಂದಿಗೆ ಮಾತುಕತೆ ನಡೆಸಿ, ಗ್ರಾಮ ಪಂಚಾಯತ್ಗಳಿಂದ ಸಂಗ್ರಹಿಸಲಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ಘಟಕಕ್ಕೆ ಸಾಗಿಸಲು ಹೆಚ್ಚುವರಿ ವಾಹನಗಳನ್ನು ನಿಯೋಜಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಬೇಕು…
ಧರ್ಮಸ್ಥಳದಲ್ಲಿ (Dharmasthala) ಗ್ರಾಮ ಸಮೀಪದ ಪಾಂಗಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿದ್ದ ಸಂತೋಷ್ ರಾವ್ಗೆ ಸುಪ್ರೀಂ ಕೋರ್ಟ್ನಲ್ಲಿ (Supreme Court) ಮತ್ತೆ ಹಿನ್ನಡೆಯಾಗಿದೆ. ಪರಿಹಾರ ಧನಕ್ಕಾಗಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ಕೋರ್ಟ್ನ ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠ ವಜಾಗೊಳಿಸಿದೆ. ಪರಿಹಾರ ಧನಕ್ಕೆ ಅರ್ಹ ಎಂದು ಅನ್ನಿಸಿದ್ರೆ ಕೆಳ ಹಂತದ ನ್ಯಾಯಲಯದಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಕೋರ್ಟ್ ಆದೇಶಿಸಿದೆ. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ (Santhosh Rao) ಖುಲಾಸೆಗೊಂಡ ಬಳಿಕ ಪರಿಹಾರ ಧನಕ್ಕಾಗಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದ. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧಿಸಿದಂತೆ 11 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಸಿಬಿಐ ವಿಶೇಷ ಕೋರ್ಟ್ 2023ರ ಜೂನ್ 16ರಂದು ತೀರ್ಪು ನೀಡಿತ್ತು. ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿತ್ತು. ಸಿಬಿಐ…
ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ
ಪುತ್ತೂರು: ಪುತ್ತೂರು ತಾಲೂಕಿನ ಸಾರ್ವಜನಿಕರು ಎದುರಿಸುತ್ತಿರುವ ಅಕ್ರಮ–ಸಕ್ರಮ ಹಾಗೂ 94C ಅರ್ಜಿಗಳ ವಿಲೇವಾರಿ ವಿಳಂಬ, ಜೊತೆಗೆ ಪೌತಿ ಖಾತೆ ಬದಲಾವಣೆಯಲ್ಲಿನ ಸಮಸ್ಯೆಗಳ ಕುರಿತು ಪುತ್ತೂರು ತಾಲೂಕಿನ ತಹಶೀಲ್ದಾರ್ರನ್ನು ಭೇಟಿ ಮಾಡಿ ಪುತ್ತಿಲ ಪರಿವಾರ ನಿಯೋಗ ಚರ್ಚಿಸಿತು. ಅಕ್ರಮ -ಸಕ್ರಮ ಸಮಿತಿ ಯಲ್ಲಿ ಮಂಜೂರಾದ ಕಡತಗಳಿಗೆ 3ವರ್ಷದಲ್ಲಿ ಈವರೆಗೂ ಅಂದಾಜು 25ಕಡತ ಗಳಿಗೆ ಹಕ್ಕುಪತ್ರ ಮತ್ತು ಪಹಣಿ ನೀಡಿರುತ್ತಿರಿ. ಉಳಿದ ಕಡತಗಳಿಗೆ 3ವರ್ಷದಲ್ಲಿ ಹಕ್ಕು ಪತ್ರ ಹಾಗೂ ಪಹಣಿ ನೀಡದೆ ಇರುವುದರಿಂದ ಕೃಷಿಕರಿಗೆ ಬೆಳೆ ವಿಮೆ, ಕೃಷಿ ಸಾಲ ಪಡೆಯಲು ಅನಾನುಕೂಲವಾಗಿದ್ದು ಈ ಸಮಸ್ಸೆ ಯನ್ನು ಈ ಕೂಡಲೇ ಬಗೆಹರಿಸದಿದ್ದಲ್ಲಿ ಕೃಷಿಕರನ್ನು ಮತ್ತು ಫಲಾನುಭವಿಗಳನ್ನು ಸೇರಿಸಿಕೊಂಡು ಪುತ್ತಿಲ ಪರಿವಾರದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಮತ್ತು ಕೆಲವು ಗ್ರಾಮಗಳಲ್ಲಿ ಇರುವ ದೊಡ್ಡ್ ಸರ್ವೇ ನಂಬರ್ ನ ಪೋಡಿ ಸಮಸ್ಸೆಯನ್ನು ಬಗೆಹರಿಸಲು ಸೂಚಿಸಲಾಯಿತು. ಅಕ್ರಮ–ಸಕ್ರಮ ಯೋಜನೆಯಡಿ ಹಲವು ವರ್ಷಗಳಿಂದ ಅರ್ಜಿ ಸಲ್ಲಿಸಿರುವ ಅರ್ಜಿದಾರರು ತಮ್ಮ ಅರ್ಜಿಗಳ ವಿಲೇವಾರಿಗಾಗಿ ಕಾಯುತ್ತಿರುವ ಪರಿಸ್ಥಿತಿ ಇದೆ. ಅದೇ ರೀತಿ, ಕರ್ನಾಟಕ…
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿಮಾಚಲ ಪ್ರದೇಶದಲ್ಲಿ(Himachal Pradesh) ಇಂದಿನಿಂದ ಜಾರಿಗೆ ಬರುವಂತೆ ಪ್ರತಿ ಲೀಟರ್ ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel) ಮೇಲಿನ ದರ 60 ಪೈಸೆ ಹೆಚ್ಚಳವಾಗಿದೆ. ವಿಧವಾ ಮತ್ತು ಅನಾಥ ಕಲ್ಯಾಣ ಸೆಸ್ (Widow and Orphan Cess) ಹೆಸರಿನಲ್ಲಿ 60 ಪೈಸೆ ಕರ ಸಂಗ್ರಹಿಸಲು ಸುಖ್ವಿಂದರ್ ಸಿಂಗ್(Sukhvinder Singh Sukhu) ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ಮುಂದಾಗಿದೆ. ಕಲ್ಯಾಣ ನಿಧಿಯ ಹೆಸರಿನಲ್ಲಿ ಸಾಮಾನ್ಯ ಸಾರ್ವಜನಿಕರು, ಟ್ಯಾಕ್ಸಿ ಚಾಲಕರು, ರೈತರು ಸೇರಿದಂತೆ ಪ್ರತಿಯೊಬ್ಬ ವಾಹನ ಸವಾರರ ಮೇಲೆಯೂ ಈ ತೆರಿಗೆಯ ಹೊರೆ ಬಿದ್ದಿದೆ. ಪೆಟ್ರೋಲಿಯಂ ಡೀಲರ್ಗಳ ಸಂಘವು ಸರ್ಕಾರದ ಈ ಕ್ರಮವನ್ನು ಖಂಡಿಸಿದೆ. ದರ ಏರಿಕೆಗೆ ಬಿಜೆಪಿ ಖಂಡನೆ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಸರ್ಕಾರದ ಕ್ರಮವನ್ನು ತೀವ್ರವಾಗಿ ಟೀಕಿಸಿದ್ದು, ಹಿಮಾಚಲ ಪ್ರದೇಶದಲ್ಲಿ ಈಗಾಗಲೇ ಡೀಸೆಲ್ ಮೇಲಿನ ವ್ಯಾಟ್ ಅನ್ನು ಎರಡು ಬಾರಿ (ತಲಾ 3 ರೂ.) ಹೆಚ್ಚಿಸಲಾಗಿದೆ. ಪ್ರಸ್ತುತ ಜಾರಿಯಾದ ಸೆಸ್ ಸೇರಿ ಒಟ್ಟಾರೆಯಾಗಿ ಡೀಸೆಲ್ ದರ…
ದೇವಾಲಯದೊಳಗೆ ದೇವರ ವಿಗ್ರಹದ ಚಿತ್ರ ತೆಗೆಯುತ್ತಾ ಬೇರೆಯವರಗ ದರ್ಶನಕ್ಕೆ ತೊಂದರೆ ಉಂಟುಮಾಡುವ ಪ್ರಕರಣಗಳು ಹೆಚ್ಚಾದ ಕಾರಣ, ತಮಿಳುನಾಡು ಸರ್ಕಾರವು ರಾಜ್ಯದ ಎಲ್ಲಾ ದೇವಾಲಯಗಳ ಆವರಣದಲ್ಲಿ ಮೊಬೈಲ್ ಫೋನ್ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಇತ್ತೀಚಿನ ದಿನಗಳಲ್ಲಿ ಅನೇಕ ದೇವಾಲಯಗಳ ಗರ್ಭಗುಡಿ ಹಾಗೂ ದೇವರ ವಿಗ್ರಹಗಳ ದೃಶ್ಯಗಳನ್ನು ಮೊಬೈಲ್ ಮೂಲಕ ವಿಡಿಯೋ ಮಾಡಿ, ಸಾಮಾಜಿಕ ಮಾಧ್ಯಮಗಳಲ್ಲಿ ರೀಲ್ಸ್ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿತ್ತು. ಸೆಪ್ಟೆಂಬರ್ 1 ರ ಒಳಗಾಗಿ ರಾಜ್ಯದ ಎಲ್ಲಾ ಪ್ರಮುಖ ದೇವಾಲಯಗಳ ಪ್ರವೇಶ ದ್ವಾರ ಅಥವಾ ಪಾದರಕ್ಷೆ ಇಡುವ ಜಾಗದ ಬಳಿ ಮೊಬೈಲ್ ಫೋನ್ಗಳನ್ನು ಸುರಕ್ಷಿತವಾಗಿ ಇಡಲು ಪ್ರತ್ಯೇಕ ಕೌಂಟರ್ಗಳನ್ನು ನಿರ್ಮಿಸಲಾಗುವುದು. ಈ ವೇಳೆ ಭಕ್ತರು ತಮ್ಮ ಫೋನ್ಗಳನ್ನು ಇಲ್ಲಿ ಜಮಾವಣೆ ಮಾಡಲು ಪ್ರತಿ ಮೊಬೈಲ್ಗೆ ಕೇವಲ ₹5 ಶುಲ್ಕ ಪಾವತಿಸಬೇಕಾಗುತ್ತದೆ. ಇನ್ನು, ಫೋನ್ ಪಡೆದ ತಕ್ಷಣ ಇಂಟಿಗ್ರೇಟೆಡ್ ಟೆಂಪಲ್ ಮ್ಯಾನೇಜ್ಮೆಂಟ್ ಸಿಸ್ಟಮ್ (ITMS) ಮೂಲಕ ಭಕ್ತರಿಗೆ ಅಧಿಕೃತ ರಸೀದಿಯನ್ನು ನೀಡಲಾಗುತ್ತದೆ. ಅದರಂತೆ, ದರ್ಶನ ಮುಗಿದ ತರುವಾಯೂ ಈ…
ಪುತ್ತೂರು: ಆ.7ರಂದು ಪುತ್ತೂರಿನಲ್ಲಿ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾಮಟ್ಟದ ತಿರಂಗಾ ಯಾತ್ರೆ(Tiranga Yatra) ಕಾರ್ಯಕ್ರಮ ನಡೆಯಲಿದ್ದು, ಮಾಜಿ ಸಚಿವರು ಹಾಗೂ ಪರಿಷತ್ ಸದಸ್ಯರಾದ ಸಿ.ಟಿ.ರವಿ ಭಾಗವಹಿಸಲಿದ್ದಾರೆ. ಬಿಜೆಪಿ ಹಾಗೂ ಪುತ್ತಿಲ ಪರಿವಾರದ ಒಳಜಗಳದ ಮಧ್ಯೆ ಈ ಯಾತ್ರೆಯು ಅತ್ಯಂತ ಮಹತ್ವವನ್ನು ಪಡೆದಿದೆ. ಆ.7ರಂದು ಮಧ್ಯಾಹ್ನ 3 ಗಂಟೆಗೆ ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಮುಂಭಾಗದಿಂದ ಯಾತ್ರೆ ಆರಂಭಗೊಂಡು ನಗರದ ಕಿಲ್ಲೆ ಮೈದಾನದವರೆಗೆ ನಡೆಯಲಿದೆ. ರಾಷ್ಟ್ರಧ್ವಜ ಹಿಡಿದು 5 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವರು. ಸಭಾ ಕಾರ್ಯಕ್ರಮದಲ್ಲಿ ಬಿ.ವೈ ವಿಜಯೇಂದ್ರ, ಸಿ.ಟಿ.ರವಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ಪ್ರಮುಖರು ಭಾಗವಹಿಸುವರು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗಿತ್ತು. ಆದರೆ ಮಹತ್ತರ ಬೆಳವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಗಮನ ಬಹುತೇಕ ಅನುಮಾನ ಎನ್ನಲಾಗಿದೆ. ಕಿಲ್ಲೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಪ್ರಸ್ತುತ ಪುತ್ತೂರಿನ ಟೌನ್ ಹಾಲ್ಗೆ ಶಿಫ್ಟ್ ಮಾಡಲಾಗಿದೆ. ತಿರಂಗಾ ಯಾತ್ರೆಗೆ ಐದು ಸಾವಿರ ಜನ ಸೇರಿಸುವ ಗುರಿ; ಶೈಕ್ಷಣಿಕ ಸಂಸ್ಥೆಯಿಂದ ವಿದ್ಯಾರ್ಥಿಗಳನ್ನು ಕರೆ ತರಲು ಯೋಜನೆ ತಿರಂಗಾ…
