Author: admin
NEET ಹಗರಣಕ್ಕೆ ಸಂಬಂಧಿಸಿ ಪ್ರತಿಭಟನೆ ಬಳಿಕ ನಡೆದಿರುವ ಮಹತ್ವದ ಬೆಳವಣಿಗೆಯಲ್ಲಿ ಇದೀಗ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ಮೋದಿ ಅವರಿಗೆ ಕಳುಹಿಸಿದ್ದಾರೆ. ರಾಜೀನಾಮೆ ಬೆನ್ನಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾವುಕ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ ನನ್ನ ಯುವ ಸ್ನೇಹಿತರೇ, ನಾನು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣ ಸುಧಾರಣೆಗೆ ಸಮರ್ಪಿತನಾಗಿದ್ದೇನೆ. ಬಲವಾದ, ಎಲ್ಲರನ್ನೂ ಒಳಗೊಂಡ ಮತ್ತು ದೂರದೃಷ್ಟಿಯ ಶಿಕ್ಷಣ ವ್ಯವಸ್ಥೆಯು ಬಲವಾದ ರಾಷ್ಟ್ರದ ಅಡಿಪಾಯ ಎಂದು ನಾನು ಯಾವಾಗಲೂ ನಂಬಿದ್ದೇನೆ. ದೇಶದ ಯುವಕರ ಆಕಾಂಕ್ಷೆಗಳು, ಭಾವನೆಗಳು ಮತ್ತು ನ್ಯಾಯಯುತ ನಿರೀಕ್ಷೆಗಳನ್ನು ನಾನು ಆಳವಾಗಿ ಗೌರವಿಸುತ್ತೇನೆ. ಭಾರತದ ಯುವ ಪೀಳಿಗೆಯ ಕನಸುಗಳನ್ನು ನನಸಾಗಿಸುವುದು ನಮ್ಮ ಎಲ್ಲಾ ರಾಜಕೀಯ ಮತ್ತು ಸಾಮಾಜಿಕ ಜೀವನದಲ್ಲಿ ನೈತಿಕ ಬದ್ಧತೆಯಾಗಿದೆ. ಅವರ ದೂರದೃಷ್ಟಿಯ ನಾಯಕತ್ವದಲ್ಲಿ ರಾಷ್ಟ್ರಕ್ಕೆ ಸೇವೆ ಸಲ್ಲಿಸಲು ನನಗೆ ದೊರೆತ ಅವಕಾಶಕ್ಕಾಗಿ ನಾನು…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಹಾಗೂ ಶಿಕ್ಷಣತಜ್ಞ ಮತ್ತು ಪರಿಸರವಾದಿ ಸೋನಮ್ ವಾಂಗ್ಚೂಕ್ ಅವರ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದಿದ್ದು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಪ್ರಧಾನ್ ರಾಜೀನಾಮೆ ಪಟ್ಟು ಹಿಡಿದಿದ್ದ ಸಿಜೆಪಿ, ಜಂತರ್ ಮಂತರ್‌ನಲ್ಲಿ ಅವರು ರಾಜೀನಾಮೆ ನೀಡುವವರೆಗೆ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಹೇಳಿತ್ತು. NEET ಹಗರಣಕ್ಕೆ ಸಂಬಂಧಿಸಿ ಪ್ರತಿಭಟನೆ ಬಳಿಕ ನಡೆದಿರುವ ಮಹತ್ವದ ಬೆಳವಣಿಗೆಯಲ್ಲಿ ಇದೀಗ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ಮೋದಿ ಅವರಿಗೆ ಕಳುಹಿಸಿದ್ದಾರೆ. ಕಾಕ್ರೋಚ್ ಜನತಾ ಪಕ್ಷ(CJP) ಮತ್ತು ಕೇಂದ್ರದ ನಡುವಿನ ಮೂರನೇ ಸುತ್ತಿನ ಮಾತುಕತೆಗೆ ಕೆಲವೇ ಗಂಟೆಗಳ ಮೊದಲು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಚಾರವನ್ನು ಘೋಷಿಸಿದ್ದಾರೆ. ಭಾವುಕ ಪತ್ರ ಬರೆದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸಾಮಾಜಿಕ…
ರಾಮಕೃಷ್ಣ ಮಠ, ಮಂಗಳೂರಿನಲ್ಲಿ ಜುಲೈ 29, ಬುಧವಾರ ಶ್ರೀ ಗುರುಪೂರ್ಣಿಮೆಯ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9 ಗಂಟೆಗೆ ವೇದಪಾರಾಯಣ, ವಿಷ್ಣುಸಹಸ್ರನಾಮ ಪಾರಾಯಣ, ವಿಶೇಷ ಪೂಜೆ, ಅರ್ಚನೆ, ಭಜನೆ, ಆಧ್ಯಾತ್ಮಿಕ ಪ್ರವಚನ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಲಿವೆ. ಮಧ್ಯಾಹ್ನ 1.00 ಗಂಟೆಗೆ ‘ಸತ್ಯಂ ಶಿವಂ ಸುಂದರಂ ನವರಸ ಯಕ್ಷೋತ್ಸವ’ ಶೀರ್ಷಿಕೆಯಡಿ ಯಕ್ಷಕಲಾರಾಧನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಜನ್ಸಾಲೆ ರಾಘವೇಂದ್ರ ಆಚಾರ್ ಮತ್ತು ಬಳಗ ಹಿಮ್ಮೇಳವನ್ನು ನಡೆಸಲಿದ್ದು, ಪ್ರಶಾಂತ್ ಆಚಾರ್ ಮದ್ದಳೆ ಹಾಗೂ ಪ್ರಶಾಂತ್ ಮುಂಡಾಡಿ ಚೆಂಡೆ ವಾದನ ಮಾಡಲಿದ್ದಾರೆ. ಮುಮ್ಮೇಳದಲ್ಲಿ ಕೊಂಡದಕುಳಿ ರಾಮಚಂದ್ರ ಹೆಗಡೆ, ತೋಟಿಮನೆ ಗಣಪತಿ ಹೆಗಡೆ, ನೀಳ್ಕೊಡು ಶಂಕರ ಹೆಗಡೆ, ಶಶಿಕಾಂತ ಶೆಟ್ಟಿ ಕಾರ್ಕಳ, ಚಪ್ಪರಮನೆ ಶ್ರೀಧರ ಹೆಗಡೆ ಹಾಗೂ ಕಾರ್ತಿಕ್ ಚಿಟ್ಟಾಣಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಸಮನ್ವಯವನ್ನು ಕಬ್ಬಿನಾಲೆ ವಸಂತ ಭಾರಧ್ವಾಜ್ ವಹಿಸಲಿದ್ದಾರೆ. ಶ್ರೀ ಗುರುಪೂರ್ಣಿಮೆಯ ಈ ಪವಿತ್ರ ಕಾರ್ಯಕ್ರಮಗಳಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…
ಜನರ ಸಮಸ್ಯೆಗೆ ಪುತ್ತಿಲ ಧ್ವನಿ; ರಸ್ತೆ ದುರಸ್ತಿಗೆ ಅಧಿಕಾರಿಗಳ ಬೆನ್ನ ಹಿಂದೆ ಬಿದ್ದ ಅರುಣ್ ಕುಮಾರ್ ಪುತ್ತಿಲ
ಪುರುಷರಕಟ್ಟೆಯಿಂದ-ಶಾಂತಿಗೋಡು-ಆನಡ್ಕ ಸಂಪರ್ಕ ರಸ್ತೆಯು ಮಾಯಂಗಲದಿಂದ ಕೂಡುರಸ್ತೆಯವರೆಗೆ ಸಂಪೂರ್ಣವಾಗಿ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದ್ದು ಸದ್ರಿ ರಸ್ತೆಯನ್ನು ಶೀಘ್ರದಲ್ಲಿ ವಾಹನ ಸಂಚಾರಕ್ಕೆ ಯೋಗ್ಯವಾಗಿಸಬೇಕೆಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಪುತ್ತೂರು ಇವರನ್ನು ನಿನ್ನೆ 23-07-2026 ರಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಹಾಗೂ ಟ್ರಸ್ಟಿನ ಪದಾಧಿಕಾರಿಗಳು ಭೇಟಿ ನೀಡಿ ಮನವಿ ನೀಡಿದ್ದರು. ಈ ಸಂದರ್ಭದಲ್ಲಿ ಟ್ರಸ್ಟಿನ ಪದಾಧಿಕಾರಿಗಳಾದ ಉಮೇಶ್ ಕೋಡಿಬೈಲು,ಅನಿಲ್ ತೆಂಕಿಲ,ವಿಶ್ವನಾಥ ಬಲ್ಯಾಯ,ಜಯರಾಮ ಪೂಜಾರಿ,ಲಕ್ಷ್ಮೀಪ್ರಸಾದ್ ಆನಾಜೆ,ಅವಿನಾಶ್ ಪುರುಷರಕಟ್ಟೆ,ರಾಕೇಶ್ ಓಜಾಲ ಉಪಸ್ಥಿತರಿದ್ದರು. ತಕ್ಷಣ ಮನವಿಗೆ ಸ್ಪಂದಿಸಿದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರಾಮದ ಪಿಡಿಓ ರವರನ್ನು ಹದಗೆಟ್ಟಿರುವ ರಸ್ತೆಯ ಸ್ಥಳಕ್ಕೆ ಕಳುಹಿಸಿದ್ದಾರೆ. ಸ್ಥಳದಲ್ಲಿ ಪುತ್ತಿಲ ಪರಿವಾರ ನಿಯೋಗ ಹಾಗೂ ಗ್ರಾಮಸ್ಥರು ಪಿಡಿಓ ರವರನ್ನು ರಸ್ತೆ ಕೂಡಲೇ ಸಂಚಾರಕ್ಕೆ ಯೋಗ್ಯವಾಗಿಸಬೇಕೆಂದು ಆಗ್ರಸಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ‘ಸಂಸದ್ ಚಲೋ’ ಪ್ರತಿಭಟನೆ ವೇಳೆ ದೆಹಲಿ ಪೊಲೀಸರ (Delhi Police) ಲಾಠಿಚಾರ್ಜ್ ಮತ್ತು ಬಲಪ್ರಯೋಗದ ವಿರುದ್ಧ ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಳ್ಳಲು ಸುಪ್ರೀಂ ಕೋರ್ಟ್ (Supreme Court) ಬುಧವಾರ ನಿರಾಕರಿಸಿದೆ. ಅರ್ಜಿದಾರ ವಕೀಲರು ಪೊಲೀಸರ ಕೃತ್ಯವನ್ನು ಸಾಬೀತುಪಡಿಸಲು ವಿಡಿಯೋ ಸಾಕ್ಷ್ಯಗಳನ್ನು ಸಲ್ಲಿಸಲು ಮುಂದಾದಾಗ, ನಮ್ಮ ಸಮಯವನ್ನೂ ವ್ಯರ್ಥ ಮಾಡಬೇಡಿ, ನಿಮ್ಮ ಸಮಯವನ್ನೂ ಹಾಳು ಮಾಡಿಕೊಳ್ಳಬೇಡಿ ಎಂದು ಸಿಜೆಐ ಎಚ್ಚರಿಸಿದರು. ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯದ ವಿಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸುವಂತೆ ವಕೀಲರು ಕೋರಿದಾಗ, “ನಮಗೆ ವಿಡಿಯೋಗಳನ್ನು ನೋಡುವ ಆಸಕ್ತಿಯಿಲ್ಲ, ಅದನ್ನು ನೋಡಲು ನಮ್ಮ ಬಳಿ ಸಮಯವೂ ಇಲ್ಲ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜಯಮಾಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠ ತಿಳಿಸಿತು. ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ದೆಹಲಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಈ ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಪೊಲೀಸರ ಅತಿಯಾದ ಬಲಪ್ರಯೋಗವನ್ನು ಪ್ರಶ್ನಿಸಿ…
ಉಗ್ರ ಸಂಘಟನೆ ಐಸಿಸ್‌ಗೆ (ISIS) ಹಣಕಾಸಿನ ನೆರವು ನೀಡಿದ ಹಾಗೂ ಯುವಕರನ್ನು ಕಾನೂನುಬಾಹಿರವಾಗಿ ವಿದೇಶಕ್ಕೆ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಬೆಂಗಳೂರಿನ 8 ಪ್ರಮುಖ ಸ್ಥಳಗಳಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಖಲಿಸಿದ್ದ ಎಫ್‌ಐಆರ್ ಹಾಗೂ ಚಾರ್ಜ್‌ಶೀಟ್ ಆಧರಿಸಿ ಜಾರಿ ನಿರ್ದೇಶನಾಲಯವು ಪ್ರಕರಣವನ್ನು ಕೈಗೆತ್ತಿಕೊಂಡು ಈ ಕಾರ್ಯಾಚರಣೆ ನಡೆಸಿದೆ. ಬೆಂಗಳೂರಿನ ಪ್ರೇಜರ್ ಟೌನ್, ಗುರಪ್ಪನಪಾಳ್ಯ, ಬಿಸ್ಮಿಲ್ಲಾ ನಗರ, ಕಮ್ಮನಹಳ್ಳಿಯಲ್ಲಿ ಇಡಿ (ಜಾರಿ ನಿರ್ದೇಶನಾಲಯ) ದಾಳಿ ನಡೆಸಿದೆ. ಇಕ್ರಾ ವೆಲ್ಫೇರ್ ಟ್ರಸ್ಟ್, ಗೈಡೆನ್ಸ್ ಫಾರ್ ಮ್ಯಾನ್‌ಕೈಂಡ್ ಟ್ರಸ್ಟ್ ಸಂಬಂಧಿಸಿದ ಹಣ ಉಗ್ರ ಚಟುವಟಿಕೆಗಳಿಗೆ ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಮುಸ್ಲಿಂ ಯುವಕರನ್ನು ಐಸಿಸ್ ಸಿದ್ಧಾಂತದತ್ತ ಆಕರ್ಷಿಸಲು ‘ಇಕ್ರಾ ಕ್ಯಾಂಪ್’ ಎಂಬ ವ್ಯಕ್ತಿತ್ವ ವಿಕಾಸ ಕಾರ್ಯಾಗಾರವನ್ನು ಆಯೋಜಿಸುತ್ತಿದ್ದರು. ಇದರ ಮೂಲಕ ಬೆಳೆದ ‘ಕುರ್‌ಆನ್ ಸರ್ಕಲ್’ ಎಂಬ ವಾರಾಂತ್ಯದ ಅಧ್ಯಯನ ಕೂಟಗಳ ಮೂಲಕ ಯುವಕರನ್ನು ಗುರುತಿಸಿ ಬ್ರೇನ್‌ವಾಶ್ ಮಾಡಲಾಗುತ್ತಿತ್ತು. ತಮ್ಮ ಸ್ವಂತ ಉಳಿತಾಯ,…
ಸಂಸತ್ ಮುತ್ತಿಗೆಗೆ ಯತ್ನಿಸಿದ ಕಾಕ್ರೋಚ್ ಜನತಾ ಪಾರ್ಟಿ (CJP) ಸದಸ್ಯರ ಮೇಲೆ ಪೊಲೀಸರು ಲಾಠಿಚಾರ್ಜ್(Lathi Charge) ಮಾಡಿದ್ದಾರೆ. ಲಾಠಿಚಾರ್ಜ್ ಬೆನ್ನಲ್ಲೇ ದೆಹಲಿಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಂಡಿದೆ. ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ, ನವದೆಹಲಿ ವ್ಯಾಪಕ ಉದ್ವಿಗ್ನತೆಗೆ ಸಾಕ್ಷಿಯಾಯಿತು. ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಆಯೋಜಿಸಿದ್ದ “ಚಲೋ ಸಂಸದ್” ಮೆರವಣಿಗೆಯನ್ನು ತಡೆಯಲು ಪೊಲೀಸರು ಲಾಠಿ ಪ್ರಹಾರ ನಡೆಸಿದಾಗ, ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಭಾರಿ ಘರ್ಷಣೆ ಸಂಭವಿಸಿತು. ದೆಹಲಿ ಪೊಲೀಸರು ಈ ಮೆರವಣಿಗೆಗೆ ಯಾವುದೇ ಪೂರ್ವಾನುಮತಿ ನೀಡಿರಲಿಲ್ಲ. ಆದೇಶವನ್ನು ಉಲ್ಲಂಘಿಸಿ ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪರಿಸ್ಥಿತಿ ಕೈಮೀರಿ, ಗೊಂದಲದ ವಾತಾವರಣ ನಿರ್ಮಾಣವಾಯಿತು. ಸಂಸತ್ತಿನ ಅಧಿವೇಶನ ಆರಂಭವಾಗುತ್ತಿರುವುದರಿಂದ ದೆಹಲಿ ನಗರದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ’ಯ (BNSS) ಸೆಕ್ಷನ್ 163 (ಹಳೆಯ 144ನೇ ವಿಧಿ) ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ಮೆರವಣಿಗೆಗೆ ಯಾವುದೇ ಅಧಿಕೃತ ಅನುಮತಿ ನೀಡಿರಲಿಲ್ಲ ಮತ್ತು ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು…
ಬಂಟ್ವಾಳ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಮಚ್ಚಿನಿಂದ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ನಿವಾಸಿ ಚೇತನ್‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬ೦ದಿದೆ. ಬಂಧನಕ್ಕೆ ಸಂಬಂಧಿಸಿದ ಅಧಿಕೃತ ಮಾಹಿತಿ ಹಾಗೂ ಪೊಲೀಸರು ಯಾವ ಸ್ಥಳದಲ್ಲಿ ಆರೋಪಿಯನ್ನು ವಶಕ್ಕೆ ಪಡೆದರು ಎಂಬ ಸಂಪೂರ್ಣ ವಿವರವನ್ನು ಇನ್ನಷ್ಟೇ ಪ್ರಕಟಿಸುವ ನಿರೀಕ್ಷೆಯಿದೆ. FIR ನಲ್ಲಿ ಏನಿತ್ತು ?: ಘಟನೆ ಸಂಬಂಧ ಲಾವಣ್ಯಾ ಅವರ ಸಹೋದರಿಯ ಪತಿ ಗೌತಮ್ ಎಂಬವರು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಉಳಿ ಗ್ರಾಮದ ಕಕ್ಯ ಪದವು ನಿವಾಸಿಯಾಗಿರುವ ಗೌತಮ್ ಅವರ ಪತ್ನಿ ಹಾಗೂ ಪತ್ನಿಯ ತಂಗಿ ಲಾವಣ್ಯ ಕಲ್ಲಡ್ಕ ಪುಷ್ಪರಾಜ್ ನರ್ಸಿಂಗ್ ಹೋಮ್ ನಲ್ಲಿ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದರು. ಲಾವಣ್ಯರಿಗೆ ಗುರುವಾರ (ಜು.17) ಹಗಲು ಪಾಳಿ ಕೆಲಸವಿದ್ದು, ಲಾವಣ್ಯ ಅವರ ಅಕ್ಕ ಚೈತ್ರಾರಿಗೆ ರಾತ್ರಿ ಪಾಳಿ ಕರ್ತವ್ಯ…
ಮಂಗಳೂರು: ಬಿ.ಸಿ ರೋಡಿನಲ್ಲಿ ದಾರುಣವಾಗಿ ಹತ್ಯೆಯಾದ ಸಹೋದರಿ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲರು ಆರೋಪಿಯ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲು ಆಗ್ರಹಿಸಿದರು. ದಕ್ಷಿಣ ಕನ್ನಡದಲ್ಲಿ ತೀವ್ರವಾಗಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಹಾಗೂ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಆರೋಪಿಯನ್ನು ತಕ್ಷಣ ಬಂಧಿಸಿ ಸಾರ್ವಜನಿಕರ ಆಗ್ರಹದಂತೆ ಆರೋಪಿಯನ್ನು ಎನ್‌ಕೌಂಟರ್ ಒಳಪಡಿಸಿ, ಮುಂದಿನ ದಿನದಲ್ಲಿ ಯಾರು ಇಂಥಹ ಕುಕೃತ್ಯವನ್ನು ಎಸಗದಂತೆ ಕಠಿಣ ಕ್ರಮ ಕೈಗೊಳ್ಳುವಂತೆ ಇಲಾಖೆಗೆ ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ಮೃತ ಯುವತಿಯ ಕುಟುಂಬದವರಿಗೆ ಪರಿಹಾರ ಘೋಷಿಸಬೇಕೆಂದು ಉಸ್ತುವಾರಿ ಸಚಿವರಿಗೆ ಹಾಗೂ ಸರ್ಕಾರಕ್ಕೆ ಆಗ್ರಹಿಸಿದರು. ಘಟನೆಯ ವಿವರ ಯುವತಿಯೋರ್ವಳನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ನಡೆಸಿದ ಘಟನೆ ಬಿ.ಸಿ.ರೋಡ್ KSRTC ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದಿದೆ. ಕಕ್ಯಪದವು ನಿವಾಸಿ ಲಾವಣ್ಯ (21) ಮೃತ ಯುವತಿ ಎಂದು ತಿಳಿದು ಬಂದಿದೆ. ಮೃತ ಯುವತಿ ಲಾವಣ್ಯ ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಬೆಳ್ತಂಗಡಿ…
ಮಂಗಳೂರು: ಉಪ್ಪಿನಂಗಡಿಯ ಪದ್ಮುಂಜ ಸಮೀಪದ ಅಡೆಂಜ ಎಂಬಲ್ಲಿ ಖೋಟಾನೋಟು ತಯಾರಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಪೊಲೀಸರು ಜುಲೈ 15 ರ ತಡರಾತ್ರಿ ಮಿಂಚಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯ ಮೂಲಗಳ ಪ್ರಕಾರ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಖೋಟಾನೋಟು ತಯಾರಿಸಲು ಬಾಡಿಗೆ ಕಟ್ಟಡ ಒದಗಿಸಿದ ಸ್ಥಳೀಯ ವ್ಯಕ್ತಿ ಸಿರಾಜ್ ಸಹಿತ ಏಳು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಅತ್ಯಾಧುನಿಕ ಯಂತ್ರಗಳನ್ನು ಬಳಸಿಕೊಂಡು ನಕಲಿ ನೋಟುಗಳನ್ನು ತಯಾರಿಸುತ್ತಿದ್ದರು ಎನ್ನುವ ಅಘಾತಕಾರಿ ವರದಿ ಬಯಲಾಗಿದ್ದು, ಈ ಜಾಲದ ಬಗ್ಗೆ ಪೊಲೀಸ್ ಇಲಾಖೆಯಿಂದ ಇನ್ನೂ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
