ನಾನು ಗೃಹಸಚಿವನಾಗಿ ಇರುವವರೆಗೂ ರಾಜ್ಯದಲ್ಲಿ ಆರ್ಎಸ್ಎಸ್ (RSS) ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ. ಆರ್ಎಸ್ಎಸ್ನವರು ಪಥಸಂಚಲನಕ್ಕೆ (Route March) ಅನುಮತಿ ತೆಗೆದುಕೊಳ್ಳಬೇಕು. ಜಸ್ಟ್ ಈಗ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದೇನೆ. 100 ವರ್ಷದ ಸಂಘಟನೆ ಕಾಗದಗಳು ಎಲ್ಲೋ ಇರಬಹುದು. ಹುಡುಕುತ್ತಿದ್ದಾರೆ ಹುಡುಕಿಕೊಂಡು ಬರಲಿ. ಇಷ್ಟು ಕೇಳಿದ್ದಕ್ಕೆ ನನ್ನ ವೈಯಕ್ತಿಕ ಮಾಹಿತಿ ಕೆದಕುತ್ತಿದ್ದಾರೆ. ಇದಕ್ಕೆಲ್ಲ ನಾನು ಹೆದರುವ ವ್ಯಕ್ತಿಯಲ್ಲ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಆರ್ಎಸ್ಎಸ್ನವರು ಧ್ವಜದ ಹೆಸರಿನಲ್ಲಿ ದೇಣಿಗೆ ತೆಗೆದುಕೊಳ್ತಾರೆ. ದೇಣಿಗೆ ಪಡೆದುಕೊಳ್ಳೋಕೆ ಇವರ ಗುರು ಯಾರು?ಹಾಗಿದ್ರೆ ಇವರಗೆ ಲೆಕ್ಕ ಕೇಳಬಾರದಾ? ಎಂದು ಗೃಹ ಸಚಿವರು ಪ್ರಶ್ನಿಸಿದ್ದಾರೆ. ನಾಳೆ ನೀವೂ ಒಂದು ಧ್ವಜದ ಮೇಲೆ ಸಂಘಟನೆ ಮಾಡಿ, ಚಂದಾ ಕಲೆಕ್ಟ್ ಮಾಡಿ. ಅವಾಗ ಐಟಿ,ಇಡಿಯವರು ಸುಮ್ನೆ ಕೂರುತ್ತಾರಾ? ಎಲ್ಲರೂ ಹೀಗೇ ಮಾಡಲಿ ಅವಾಗ ನೋಡೋಣ ಎಂದವರು ಕಿಡಿ ಕಾರಿದ್ದಾರೆ.

