ಪುತ್ತೂರು, ಆ.1: ಪುತ್ತೂರು-ಉಪ್ಪಿನಂಗಡಿ ರಸ್ತೆಯ 34ನೇ ನೆಕ್ಕಿಲಾಡಿ, ವನಸುಮ ನರ್ಸರಿ ಸಮೀಪ ನಿರ್ಮಾಣವಾಗಿರುವ ದೊಡ್ಡ ಹಾಗೂ ಅಪಾಯಕಾರಿ ಹೊಂಡಗಳನ್ನು ಕೂಡಲೇ ಮುಚ್ಚುವಂತೆ ಹಾಗೂ ಪುತ್ತೂರು-ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳ ಭಾಗದಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ಉಂಟಾಗಿರುವ ರಸ್ತೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆಗೆ ಪುತ್ತಿಲ ಪರಿವಾರ ಸಂಘಟನೆ ಆಗ್ರಹಿಸಿದೆ.

ಪುತ್ತೂರು–ಉಪ್ಪಿನಂಗಡಿ ರಸ್ತೆಯ 34ನೇ ನೆಕ್ಕಿಲಾಡಿ, ವನಸುಮ ನರ್ಸರಿ ಬಳಿ ದೊಡ್ಡದಾದ ಹಾಗೂ ಅಪಾಯಕಾರಿ ಹೊಂಡಗಳು ನಿರ್ಮಾಣವಾಗಿದೆ ಹಾಗೂ ಪುತ್ತೂರು–ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳ ರಸ್ತೆಯಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ವರ್ಷದಲ್ಲಿ 3 ಬಾರಿ ಇಂಟರ್ಲಾಕ್ ದುರಸ್ತಿ ಕೆಲಸ ನಡೆದು ಇದೀಗ 15 ದಿನಗಳಿಂದ ಬ್ಯಾರಿಕೇಡ್ ತೆರವುಗೊಳಿಸದೆ ಸಂಚಾರಕ್ಕೆ ತೊಂದರೆಯಾಗುತ್ತಿದೆ .ಕೂಡಲೇ ಬ್ಯಾರಿಕೇಡ್ ತೆರವುಗೊಳಿಸಬೇಕು ಹಾಗೂ ಮಳೆಗಾಲ ನಿಂತ ಕೂಡಲೇ ಇಂಟರ್ಲಾಕ್ ತೆರವುಗೊಳಿಸಿ ಶಾಶ್ವತ(ಕಾಂಕ್ರೀಟ್ / ಡಾಂಬರು)ರಸ್ತೆ ಮಾಡುವಂತೆ ಸಂಘಟನೆ ಮನವಿ ಸಲ್ಲಿಸಿದೆ
ಬೆದ್ರಾಳದಿಂದ-ಸರ್ವೆಯ ವರೆಗೆ ರಸ್ತೆಯಲ್ಲಿ ಬಿದ್ದಿರುವ ಅಪಾಯಕಾರಿ ಹೊಂಡಗಳನ್ನು ಕೂಡಲೇ ಮುಚ್ಚುವಂತೆ ಹಾಗೂ ಮೋರಿಯಲ್ಲಿ ಹರಿಯುವ ನೀರು ನೇರವಾಗಿ ರಸ್ತೆಗೆ ಬರುವ ಕಾರಣ ರಸ್ತೆ ಬದಿಯ ಮೋರಿಗಳನ್ನು ತಕ್ಷಣ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ. ಮಳೆ ಬಂದಾಗ ಹೊಂಡಗಳಲ್ಲಿ ನೀರು ತುಂಬಿಕೊಳ್ಳುವುದರಿಂದ ವಾಹನ ಸವಾರರಿಗೆ ಹೊಂಡಗಳು ಸರಿಯಾಗಿ ಕಾಣದೆ ಅಪಘಾತ ಸಂಭವಿಸುವ ಅಪಾಯ ಹೆಚ್ಚಾಗಿದೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಈ ಸಮಸ್ಯೆಯನ್ನು ತಕ್ಷಣ ಪರಿಹರಿಸುವ ಅಗತ್ಯವಿದೆ ಎಂದು ಮನವಿ ಸಲ್ಲಿಸಿದೆ. ಈ ಕುರಿತು PWD ಮುಖ್ಯ ಅಭಿಯಂತರರಾದ ಶ್ರೀ ರಾಜೇಶ್ ರೈ ಅವರೊಂದಿಗೆ ಚರ್ಚಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರವಾಗಿ ಹೊಂಡಗಳನ್ನು ಮುಚ್ಚಿ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಈ ಸಂದರ್ಭದಲ್ಲಿ ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಪದಾಧಿಕಾರಿಗಳಾದ ಉಮೇಶ್ ಕೋಡಿಬೈಲು, ಪ್ರಶಾಂತ್ ನೆಕ್ಕಿಲಾಡಿ, ರಾಜು ಶೆಟ್ಟಿ, ಮನೀಶ್ ಕುಲಾಲ್ ಉಪಸ್ಥಿತರಿದ್ದರು.

